ಕಾರವಾರ: ಕಾರವಾರ ತಾಲೂಕಿನ ಮುದಗಾ ಮೀನುಗಾರಿಕಾ ಬಂದರಿನಲ್ಲಿ ಶನಿವಾರ ಬೆಳಗ್ಗೆ ಸಂಭವಿಸಿದ ದುರಂತದಲ್ಲಿ ಬೋಟ್ನ ಕೋಲ್ಡ್ ಸ್ಟೋರೇಜ್ನಲ್ಲಿದ್ದ ಮೀನು ಖಾಲಿ ಮಾಡುವಾಗ ಉಸಿರುಗಟ್ಟಿ ಒಡಿಶಾ ಮೂಲದ ಇಬ್ಬರು ಕಾರ್ಮಿಕರು ಮೃತಪಟ್ಟು, ಮತ್ತೊಬ್ಬರು ತೀವ್ರ ಅಸ್ವಸ್ಥಗೊಂಡ ಘಟನೆ ನಡೆದಿದೆ.
ಒಡಿಶಾ ಮೂಲದ ಪುರಂದರ ಬಿಸರಾ (21) ಮತ್ತು ಆಕಾಶ್ ನಾಯ್ಕ್ (24) ದುರಂತದಲ್ಲಿ ಮೃತಪಟ್ಟವರೆಂದು ತಿಳಿದುಬಂದಿದೆ. ಅಲ್ಲದೆ, ಲಾಲಿಂದರ ಧ್ರುವ (41) ಎಂಬುವರಿಗೆ ತೀವ್ರ ನಿಗಾ ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಸ್ಟೋರೇಜ್ನೊಳಗೆ ಉಸಿರುಗಟ್ಟಿ ಅಸ್ವಸ್ಥಗೊಂಡಿದ್ದ ಮೂವರನ್ನೂ ತಕ್ಷಣವೇ ಅಂಕೋಲಾ ಬೆಳಕೇರಿ ನಿವಾಸಿ ಸಚಿನ್ ಕೃಷ್ಣ ಖಾರ್ವಿ ಎಂಬುವರು ಕಾರವಾರದ ಕ್ರಿಮ್ಸ್ (KRIMS) ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಕೊನೆಯುಸಿರೆಳೆದಿದ್ದಾರೆ. ಲಾಲಿಂದರ ಧ್ರುವ ಅವರ ಸ್ಥಿತಿ ಗಂಭೀರವಾಗಿದ್ದು, ತೀವ್ರ ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಳಕ್ಕೆ ಕಾರವಾರ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.
Discover more from Coastal Times Kannada
Subscribe to get the latest posts sent to your email.







Discussion about this post