ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿರುವ ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯಗೆ ಕ್ಲೀನ್ ಚಿಟ್ ನೀಡಲಾಗಿದ್ದು, ಇದೊಂದು ಕಟ್ಟು ಕಥೆ ಎಂದು ಸಿಸಿಬಿ ಮಾಧ್ಯಮ ಪ್ರಕಟಣೆ ಮೂಲಕ ಅಧಿಕೃತವಾಗಿ ತಿಳಿಸಿದೆ. ಇದರ ಬೆನ್ನಲ್ಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗಳು ನಡೆಯುತ್ತಿವೆ. ಸ್ಟಿಂಗ್ ತಂಡ ಬ್ಲ್ಯಾಕ್ ಮೇಲ್ ಏನಾದ್ರೂ ಮಾಡಿದ್ಯಾ ಎನ್ನುವ ಅನುಮಾನುಗಳು ವ್ಯಕ್ತವಾಗಿದ್ದು, ಇದರಿಂದ ದೂರುದಾರ ಸಿದ್ದರಾಮಯ್ಯನವರ ಹೇಳಿಕೆ ಪಡೆಯಲು ಪೊಲೀಸ್ ಅಧಿಕಾರಿಗಳು ಚರ್ಚೆ ನಡೆಸಿದ್ದಾರೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ಕೃಪಾ ಆಳ್ವಾರನ್ನ ಕಾಂಗ್ರೆಸ್ನಿಂದ ಉಚ್ಚಾಟನೆ ಮಾಡಲಾಗಿದೆ. ಸ್ಟಿಂಗ್ ಪ್ರಕರಣದಲ್ಲಿ ಹೆಸರು ಕೇಳಿ ಬಂದಿದ್ದರಿಂದ 6 ವರ್ಷಗಳ ಕಾಲ ಕೃಪಾ ಆಳ್ವಾ ಅವರನ್ನ ಉಚ್ಚಾಟಿಸಲಾಗಿದೆ.
ಉಚ್ಛಾಟನೆ ಆದೇಶದಲ್ಲಿ ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಮುಖಂಡರುಗಳನ್ನು ಗುರಿಯಾಗಿಸಿ ಸ್ಟಿಂಗ್ ಆಪರೇಷನ್ ನಡೆಸಲಾಗಿದೆ ಎಂಬ ಪ್ರಕರಣದ ಬಗ್ಗೆ ಮಾಧ್ಯಮಗಳಲ್ಲಿ ನಕಾರಾತ್ಮಕ ಪ್ರಚಾರ ಹಾಗೂ ಪ್ರತಿಕ್ರಿಯೆಗಳಿಂದಾಗಿ ಕಾಂಗ್ರೆಸ್ ಪಕ್ಷಕ್ಕೆ ಮುಜುಗರ ಎದುರಾದ ಹಿನ್ನೆಲೆಯಲ್ಲಿ, ಈ ಘಟನೆಯಲ್ಲಿ ತಾವು ಭಾಗಿಯಾಗಿದ್ದಾರೆಂಬ ಆರೋಪಗಳ ಹಿನ್ನಲೆಯಲ್ಲಿ ಕಾರಣ ಕೇಳಿ ನೋಟೀಸ್ ನೀಡಲಾಗಿತ್ತು ಎಂದಿದೆ.
ಕೆಪಿಸಿಸಿ ವತಿಯಿಂದ ನೀಡಲಾದ ಕಾರಣ ಕೇಳಿ ನೋಟಿಸ್’ಗೆ ತಾವು ಇದುವರೆಗೂ ಯಾವುದೇ ರೀತಿಯ ಉತ್ತರ ಅಥವಾ ಸಮಜಾಯಿಷಿ ನೀಡಿರುವುದಿಲ್ಲ. ಈ ಸ್ಟಿಂಗ್ ಪ್ರಕರಣದಲ್ಲಿ ತಮ್ಮ ಹೆಸರು ಕೇಳಿ ಬಂದ ಕಾರಣದಿಂದ ಹಾಗೂ ಈ ಪ್ರಕರಣದಲ್ಲಿ ನಿಮ್ಮ ನಡವಳಿಕೆ ಪಕ್ಷ ವಿರೋಧಿ ಚಟುವಟಿಕೆಯಾಗಿದ್ದು ಮಾನ್ಯ ಕೆಪಿಸಿಸಿ ಅಧ್ಯಕ್ಷರ ಸೂಚನೆಯ ಮೇರೆಗೆ ತಮ್ಮನ್ನು ತಕ್ಷಣದಿಂದ ಜಾರಿಗೆ ಬರುವಂತೆ ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಚಾಟನೆ ಮಾಡಲಾಗಿದೆ ಎಂದು ಆದೇಶಿಸಲಾಗಿದೆ.
ಮಾಜಿ ಸಿಎಂ ಸಿದ್ದರಾಮಯ್ಯ ಅವರೇ ಸ್ವಪಕ್ಷೀಯರೇ ಸ್ಟಿಂಗ್ ಆಪರೇಷನ್ ಪಿತೂರಿಯಲ್ಲಿ ಭಾಗಿಯಾಗಿರುವ ಬಗ್ಗೆ ತೀವ್ರ ಅಸಮಾಧಾನ ಹೊರಹಾಕಿದ್ದರು. ಇತ್ತ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಕೂಡ ಸ್ಟಿಂಗ್ ಆಪರೇಷನ್ ನಲ್ಲಿ ಭಾಗಿಯಾಗಿರುವ ಸ್ವಪಕ್ಷೀಯರ ಮೇಲೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದರು. ಇದೀಗ ಕೃಪ ಆಳ್ವಾರನ್ನು ಪಕ್ಷದಿಂದ ಉಚ್ಛಾಟಿಸುವ ಮೂಲಕ ಪಕ್ಷದ ವತಿಯಿಂದ ಸಂದೇಶವನ್ನು ರವಾನಿಸಲಾಗಿದೆ.
ಇತ್ತ ಹೆಚ್.ಡಿ.ಕುಮಾರಸ್ವಾಮಿ ಸೇರಿದಂತೆ ವಿಪಕ್ಷಗಳು ಸ್ಟಿಂಗ್ ಆಪರೇಷನ್ ವಿರುದ್ಧ ಸರ್ಕಾರ ಹಾಗೂ ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಮುಗಿಬಿದ್ದಿದ್ದರು. ಸ್ವಪಕ್ಷೀಯರೇ ಸಿದ್ದರಾಮಯ್ಯರನ್ನು ಅಧಿಕಾರದಿಂದ ಕೆಳಗಿಳಿಸಲು ಸ್ಟಿಂಗ್ ಮಾಡಿರುವ ಬಗ್ಗೆ ಗಂಭೀರ ಆರೋಪ ಮಾಡಿದ್ದರು. ಇದು ಕಾಂಗ್ರೆಸ್ ಪಕ್ಷ ಹಾಗೂ ಸರ್ಕಾರವನ್ನು ತೀವ್ರ ಮುಜುಗರಕ್ಕೆ ಸಿಲುಕಿಸಿತ್ತು.
Discover more from Coastal Times Kannada
Subscribe to get the latest posts sent to your email.







Discussion about this post