ಮಂಗಳೂರು, ಡಿ.31: ಹೊಸ ವರ್ಷಾಚರಣೆಗೆ ಮಂಗಳೂರು ನಗರದಾದ್ಯಂತ ಕಟ್ಟುನಿಟ್ಟಿನ ನಿಯಮ ಜಾರಿಗೊಳಿಸಲಾಗಿದೆ. ಈ ಬಗ್ಗೆ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಮಾತನಾಡಿ, ಜಿಲ್ಲಾಧಿಕಾರಿಯ ಸಭೆಯಂತೆ ನಿಯಮಾವಳಿ ರೂಪಿಸಲಾಗಿದೆ. ನ್ಯೂ ಈಯರ್ ಪಾರ್ಟಿ ಆಯೋಜಿಸುವವರು ಡಿ.31ರಂದು 12:30ಕ್ಕೆ ಕಾರ್ಯಕ್ರಮ ಮುಗಿಸಬೇಕು. ಅನುಮತಿ ಪಡೆದಿದ್ದರೂ ರಾತ್ರಿ 10 ಗಂಟೆಗೆ ಧ್ವನಿವರ್ಧಕಗಳನ್ನು ಬಂದ್ ಮಾಡಬೇಕು ಎಂದು ತಿಳಿಸಿದರು.
ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ 32 ಚೆಕ್ ಪೋಸ್ಟ್ ಗಳನ್ನು ಹಾಕಲಾಗಿದೆ. ಈ ಪೈಕಿ 16 ಚೆಕ್ ಪಾಯಿಂಟ್ ಗಳಿರುತ್ತವೆ. ಅತಿ ವೇಗ, ಅಜಾಗರೂಕತೆಯ ವಾಹನ ಚಾಲನೆಯ ಮೇಲೆ ನಿಗಾ ವಹಿಸಲಾಗುವುದು ಎಂದವರು ತಿಳಿಸಿದರು.
ರಾತ್ರಿ 12.30ರ ವರೆಗೆ ಕಾರ್ಯಕ್ರಮಕ್ಕೆ ಅವಕಾಶ ಇದೆಯೆಂದು ಅಲ್ಲಿ ವರೆಗೂ ಲಿಕ್ಕರ್ ಪೂರೈಸಲು ಅವಕಾಶ ಇರುವುದಿಲ್ಲ. ಲಿಕ್ಕರ್ ಸರಬರಾಜು ರಾತ್ರಿ 11 ಗಂಟೆಗೆ ಎಂದಿನಂತೆ ಕ್ಲೋಸ್ ಆಗಬೇಕು ಎಂದಿದ್ದಾರೆ ಕಮಿಷನರ್. ರಾತ್ರಿ 12:30ಕ್ಕೆ ಎಲ್ಲವೂ ಬಂದ್ ಆಗಬೇಕು ಆ ಬಳಿಕ ಯಾರೂ ರಸ್ತೆಯಲ್ಲಿ ಇರಬಾರದು. ತ್ರಿಬಲ್ ರೈಡಿಂಗ್ ಅಥವಾ ಮದ್ಯಪಾನ ಮಾಡಿ ವಾಹನ ಚಾಲನೆಗೆ ಅವಕಾಶ ಇರುವುದಿಲ್ಲ. ಅದೇರೀತಿ ಬೀಚ್ ಅಥವಾ ಸಾರ್ವಜನಿಕ ಸ್ಥಳಗಳಲ್ಲಿ ಅನುಮತಿ ಪಡೆದೇ ಕಾರ್ಯಕ್ರಮ ಆಯೋಜಿಸಬೇಕು. ಪರವಾನಿಗೆ ಇಲ್ಲದೇ ಯಾವುದೇ ಆಚರಣೆಗೆ ಅವಕಾಶವಿಲ್ಲ ಎಂದು ಕಮಿಷನರ್ ಸ್ಪಷ್ಟಪಡಿಸಿದರು.
ಬೀಚ್ ಗಳಲ್ಲಿ ಆಟವಾಡಲು ಸಂಜೆ ವರೆಗೆ ಮಾತ್ರ ಅವಕಾಶ ಇರುವುದು. ರಾತ್ರಿ ವೇಳೆ ಬೀಚ್ ಗಳಲ್ಲಿ ಉಳಿಯುವುದಕ್ಕೆ ಅವಕಾಶ ಇರಲ್ಲ. ಉಳಿದಂತೆ, ಯಾವುದೇ ಸಾರ್ವಜನಿಕ ಪ್ರದೇಶಗಳಲ್ಲಿ ಹೊಸ ವರ್ಷಾಚರಣೆ ಕಾರ್ಯಕ್ರಮ ನಡೆಸುವುದಿದ್ದರೂ ಇಲಾಖೆಯ ಅನುಮತಿ ಪಡೆಯಬೇಕು. ಅನುಮತಿ ಪಡೆಯದೆ ಸಾರ್ವಜನಿಕ ಕಾರ್ಯಕ್ರಮ ಏರ್ಪಡಿಸುವಂತಿಲ್ಲ. ಸುರತ್ಕಲ್ ಭಾಗದಲ್ಲಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಮಧ್ಯರಾತ್ರಿ ಮೀರಿ ಅನವಶ್ಯಕ ತಿರುಗಾಡಿದರೆ, ವಶಕ್ಕೆ ಪಡೆಯಲಾಗುವುದು. ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು. ಹಾಗಾಗಿ ಯಾರು ಕೂಡ ಅನವಶ್ಯಕ ವಾಗ್ವಾದ, ಪ್ರಕರಣ ದಾಖಲಾಗುವ ರೀತಿ ವರ್ತಿಸಬಾರದು ಎಂದು ಕಮಿಷನರ್ ಸೂಚಿಸಿದ್ದಾರೆ.
ನಿಯಮಗಳನ್ನು ಪಾಲಿಸಿ ಜವಾಬ್ದಾರಿಯುತವಾಗಿ ಹೊಸ ವರ್ಷಾಚರಣೆ ಆಚರಿಸಿ, ಯಾರಿಗೂ ಯಾವುದೇ ತೊಂದರೆ ಉಂಟಾಗದಂತೆ ಸಂಭ್ರಮಿಸಿ. ಎಲ್ಲರಿಗೂ ಹೊಸ ವರ್ಷದ ಶುಭಾಶಯಗಳು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ಹೇಳಿದ್ದಾರೆ.
Discover more from Coastal Times Kannada
Subscribe to get the latest posts sent to your email.








Discussion about this post