• About us
  • Contact us
  • Disclaimer
Tuesday, July 1, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಅಕ್ರಮವಾಗಿ ಮರ ಕಡಿದ ಪ್ರಕರಣ: ಬಿಜೆಪಿ ಸಂಸದ ಪ್ರತಾಪ್ ಸಿಂಹ ಸಹೋದರ ವಿಕ್ರಂ ಸಿಂಹಗೆ ಜಾಮೀನು

Coastal Times by Coastal Times
December 31, 2023
in ರಾಜ್ಯ
ಅಕ್ರಮವಾಗಿ ಮರ ಕಡಿದ ಪ್ರಕರಣ: ಬಿಜೆಪಿ ಸಂಸದ ಪ್ರತಾಪ್ ಸಿಂಹ ಸಹೋದರ ವಿಕ್ರಂ ಸಿಂಹಗೆ ಜಾಮೀನು
35
VIEWS
WhatsappTelegramShare on FacebookShare on Twitter

ಹಾಸನ: ಬೇಲೂರು ತಾಲ್ಲೂಕಿನ ನಂದಗೋಡನಹಳ್ಳಿ ಗ್ರಾಮದ ಸರ್ಕಾರಿ ಜಮೀನಿನಲ್ಲಿ ಅಕ್ರಮವಾಗಿ ಮರ ಕಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ಬಂಧಿತರಾಗಿದ್ದ ವಿಕ್ರಂ ಸಿಂಹ ಅವರಿಗೆ ಬೇಲೂರಿನ ಹಿರಿಯ ಸಿವಿಲ್‌ ನ್ಯಾಯಾಲಯ ಭಾನುವಾರ ಜಾಮೀನು ನೀಡಿ ಬೇಲೂರಿನ ಸೀನಿಯರ್​ ಸಿವಿಲ್ ಜಡ್ಜ್​​ ಆದೇಶ ಹೊರಡಿಸಿದೆ. ವಿಕ್ರಂ ಪರ ವಕೀಲ ಚಂದ್ರೇಗೌಡ, ಧರ್ಮೇಗೌಡ ಜಾಮೀನು ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶರು ಜಾಮೀನು ಮಂಜೂರು ಮಾಡಿದ್ದಾರೆ. ಹಾಸನ ‌ಜಡ್ಜ್​​​ ಮನೆಯಿಂದ ವಕೀಲರ ಜೊತೆ ವಿಕ್ರಂ ಸಿಂಹ ಹೊರಬಂದಿದ್ದಾರೆ.

ಜಿಲ್ಲೆಯ ಬೇಲೂರು ತಾಲೂಕಿನ ನಂದಗೋಡನಹಳ್ಳಿ ಬಳಿ 126ಕ್ಕೂ ಹೆಚ್ಚು ಮರ ಕಡಿದು ಸಾಗಣೆ ಪ್ರಕರಣದಲ್ಲಿ ನಿನ್ನೆ ಬಂಧಿಸಲಾಗಿತ್ತು. ವಿಕ್ರಂ ಸಿಂಹರನ್ನು ಇಂದು ಜಡ್ಜ್​​ ಮುಂದೆ ಅರಣ್ಯಾಧಿಕಾರಿಗಳು ಹಾಜರುಪಡಿಸಿದ್ದರು. ಪ್ರಕರಣ ಸಬಂಧ ರಾಕೇಶ್ ಶೆಟ್ಟಿ, ಜಯಮ್ಮ ವಿರುದ್ಧ ಬೇಲೂರು ತಹಶೀಲ್ದಾರ್ ಮಮತಾ ನೀಡಿದ್ದ ದೂರು ಆಧರಿಸಿ FIR ದಾಖಲಾಗಿತ್ತು. ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪ ಹಿನ್ನೆಲೆ ವಿಕ್ರಂ ಸಿಂಹರನ್ನು ಅರೆಸ್ಟ್ ಮಾಡಲಾಗಿತ್ತು.

ಮಾಧ್ಯಮಗಳ ಜೊತೆಗೆ ಮಾತನಾಡಿದ ವಿಕ್ರಂ ಸಿಂಹ, ‘ತುಂಬಾ ವಿಷಯಗಳಿವೆ. ಕಾಲ ಬರಲಿ, ಎಲ್ಲವನ್ನೂ ಹೇಳುತ್ತೇನೆ. ಎಷ್ಟು ಪಿತೂರಿ ಮಾಡುತ್ತಿದ್ದಾರೆ ಎನ್ನುವುದನ್ನು ಬಹಿರಂಗವಾಗಿಯೇ ಹೇಳುತ್ತೇನೆ. ಯಾರ ಕೈವಾಡ ಇದೆ ಎನ್ನುವುದನ್ನೂ ತಿಳಿಸುತ್ತೇನೆ. ಯಾರನ್ನು ನೀವು ನಿಷ್ಠಾವಂತ ಅಧಿಕಾರಿ ಎನ್ನುತ್ತಿದ್ದೀರೋ ಅವರ ನಿಷ್ಠೆ ಯಾರಿಗೆ ಎನ್ನುವುದನ್ನೂ ಹೇಳುತ್ತೇನೆ’ ಎಂದು ಪರೋಕ್ಷವಾಗಿ ಬೇಲೂರು ತಹಶೀಲ್ದಾರ್ ಮಮತಾ ವಿರುದ್ಧ ವಾಗ್ದಾಳಿ ನಡೆಸಿದರು.

‘ನಮ್ಮನ್ನು ರಾಜಕೀಯವಾಗಿ ಮುಗಿಸಲು ವ್ಯವಸ್ಥಿತ ಪಿತೂರಿ ನಡೆಸುತ್ತಿದ್ದಾರೆ. ನಮ್ಮ ಅಣ್ಣನನ್ನು ಟಾರ್ಗೆಟ್ ಮಾಡಲಾಗಿದ್ದು, ಇದೆಲ್ಲ ವ್ಯವಸ್ಥಿತವಾಗಿ ನಡೆಯುತ್ತಿರುವ ಪಿತೂರಿ’ ಎಂದು ಹೇಳಿದರು.

ಕೂಡಲೇ ವಿಕ್ರಂ ಸಿಂಹ ಅವರನ್ನು ಘಟನಾ ಸ್ಥಳವಾದ ಬೇಲೂರು ತಾಲ್ಲೂಕಿನ ನಂದಗೋಡನಹಳ್ಳಿಗೆ ಕರೆದೊಯ್ಯಲಾಯಿತು. ಅಲ್ಲಿ ಸ್ಥಳ ಮಹಜರು ಮಾಡಿದ ಅರಣ್ಯಾಧಿಕಾರಿಗಳು, ಸಂಜೆಯ ವೇಳೆಗೆ ಬೇಲೂರಿನ ಹಿರಿಯ ಸಿವಿಲ್‌ ನ್ಯಾಯಾಧೀಶ ಪ್ರಕಾಶ್‌ ನಾಯ್ಕ್‌ ಅವರ ನಿವಾಸದಲ್ಲಿ ವಿಕ್ರಂ ಸಿಂಹ ಅವರನ್ನು ಹಾಜರುಪಡಿಸಿದರು.

ಇದೇ ವೇಳೆ ವಿಕ್ರಂ ಸಿಂಹ ಪರ ವಕೀಲರು ಜಾಮೀನು ಅರ್ಜಿ ಸಲ್ಲಿಸಿದ್ದರು. ‘ಪ್ರಕರಣವು ಜಾಮೀನಿಗೆ ಅರ್ಹವಾಗಿದ್ದು, ಯಾವುದೇ ಷರತ್ತಿಲ್ಲದೇ ನ್ಯಾಯಾಧೀಶರು ಜಾಮೀನು ಮಂಜೂರು ಮಾಡಿದ್ದಾರೆ’ ಎಂದು ವಿಕ್ರಂ ಸಿಂಹ ಪರ ವಕೀಲ ಚಂದ್ರೇಗೌಡ ತಿಳಿಸಿದರು.

Share this:

  • Facebook
  • X

Like this:

Like Loading...

Related

Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ಹೊಸ ವರ್ಷಾಚರಣೆ​ ಪಾರ್ಟಿಗೆ ಡ್ರಗ್ಸ್ ಪೂರೈಸುತ್ತಿದ್ದ ಪೆಡ್ಲರ್ ಬಂಧನ

Next Post

ಬೆಂಗಳೂರಿನ ಫೀನಿಕ್ಸ್ ಮಾಲ್ ಆಫ್ ಏಷ್ಯಾ ವಿರುದ್ಧ ಕ್ರಮ ಬೇಡ; ಹೈಕೋರ್ಟ್

Related Posts

ಆರ್​​ಸಿಬಿ ವಿಜಯೋತ್ಸವ ವೇಳೆ ಕಾಲ್ತುಳಿತ ಪ್ರಕರಣ: ಆರ್​​ಸಿಬಿ, ಡಿಎನ್​​ಎಯ ಬಂಧಿತ ನಾಲ್ವರಿಗೆ ಜೂ.19ರವರೆಗೆ ನ್ಯಾಯಾಂಗ ಬಂಧನ
ರಾಜ್ಯ

ಆರ್​​ಸಿಬಿ ವಿಜಯೋತ್ಸವ ವೇಳೆ ಕಾಲ್ತುಳಿತ ಪ್ರಕರಣ: ಆರ್​​ಸಿಬಿ, ಡಿಎನ್​​ಎಯ ಬಂಧಿತ ನಾಲ್ವರಿಗೆ ಜೂ.19ರವರೆಗೆ ನ್ಯಾಯಾಂಗ ಬಂಧನ

June 6, 2025
29
ಕರಾವಳಿ ಕೋಮುಗಲಭೆ ವಿರುದ್ಧ ಮುಲಾಜಿಲ್ಲದೇ ಕ್ರಮ : ಗೃಹ ಸಚಿವ ಪರಮೇಶ್ವರ್​
ರಾಜ್ಯ

ಕರಾವಳಿ ಕೋಮುಗಲಭೆ ವಿರುದ್ಧ ಮುಲಾಜಿಲ್ಲದೇ ಕ್ರಮ : ಗೃಹ ಸಚಿವ ಪರಮೇಶ್ವರ್​

May 29, 2025
40
Next Post
ಬೆಂಗಳೂರಿನ ಫೀನಿಕ್ಸ್ ಮಾಲ್ ಆಫ್ ಏಷ್ಯಾ ವಿರುದ್ಧ ಕ್ರಮ ಬೇಡ; ಹೈಕೋರ್ಟ್

ಬೆಂಗಳೂರಿನ ಫೀನಿಕ್ಸ್ ಮಾಲ್ ಆಫ್ ಏಷ್ಯಾ ವಿರುದ್ಧ ಕ್ರಮ ಬೇಡ; ಹೈಕೋರ್ಟ್

Discussion about this post

Recent News

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

June 30, 2025
33
ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

June 28, 2025
177
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

June 30, 2025
ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

June 28, 2025
HERO VIDA VX2: ಮಾರುಕಟ್ಟೆಗೆ ಬರಲಿದೆ ‘ಹೀರೋ ವಿಡಾ ವಿಎಕ್ಸ್2’ ಎಲೆಕ್ಟ್ರಿಕ್ ಸ್ಕೂಟರ್

HERO VIDA VX2: ಮಾರುಕಟ್ಟೆಗೆ ಬರಲಿದೆ ‘ಹೀರೋ ವಿಡಾ ವಿಎಕ್ಸ್2’ ಎಲೆಕ್ಟ್ರಿಕ್ ಸ್ಕೂಟರ್

June 28, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d