• About us
  • Contact us
  • Disclaimer
Monday, May 25, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: ಜನವರಿ 14 ಹಾಗೂ 15 ರಂದು ದಿವ್ಯಬಾಲ ಯೇಸುವಿನ ವಾರ್ಷಿಕ ಮಹೋತ್ಸವ- 2026

Coastal Times by Coastal Times
December 31, 2025
in ಕರಾವಳಿ
ಮಂಗಳೂರು: ಜನವರಿ 14 ಹಾಗೂ 15 ರಂದು ದಿವ್ಯಬಾಲ ಯೇಸುವಿನ ವಾರ್ಷಿಕ ಮಹೋತ್ಸವ- 2026
15
VIEWS
WhatsappTelegramShare on FacebookShare on Twitter

ಮಂಗಳೂರು: ಬಾಲ ಯೇಸುವಿನ ಪುಣ್ಯಕ್ಷೇತ್ರ, ಕಾರ್ಮೆಲ್ ಹಿಲ್, ಬಿಕರ್ನಕಟ್ಟೆ, ಮಂಗಳೂರು ಇಲ್ಲಿಯ ವಾರ್ಷಿಕ ಮಹೋತ್ಸವವನ್ನು ಜನವರಿ 14 ಹಾಗೂ 15 ರಂದು ಅದ್ದೂರಿಯಾಗಿ ಆಚರಿಸಲಾಗುವುದು.

ವಾರ್ಷಿಕ ಮಹೋತ್ಸವ ಸಾಂಭ್ರಮಿಕ ಬಲಿಪೂಜೆಗಳು: ಜನವರಿ 14ರಂದು ಸಂಜೆ 6.00 ಘಂಟೆಗೆ ಮಹೋತ್ಸವದ ಸಾಂಭ್ರಮಿಕ ಬಲಿಪೂಜೆಯನ್ನು ಅತೀ ವಂದನೀಯ ಜೆರಾಲ್ಡ್ ಐಸಾಕ್ ಲೋಬೊ, ಉಡುಪಿ ಧರ್ಮಕ್ಷೇತ್ರದ ಧರ್ಮಾಧ್ಯಕ್ಷರು ನಡೆಸಿಕೊಡಲಿರುವರು. ಅದೇ ದಿನ ಬೆಳಿಗ್ಗೆ 10.00 ಘಂಟೆಗೆ ವೃದ್ಧರು ಹಾಗೂ ಅಸ್ವಸ್ಥರಿಗಾಗಿ ಅತೀ ವಂದನೀಯ ಡಾ| ಅಲೋಶಿಯಸ್ ಪಾವ್ಲ್ ಡಿಸೋಜಾ, ಮಂಗಳೂರು ಧರ್ಮಪ್ರಾಂತ್ಯದ ನಿವೃತ್ತ ಧರ್ಮಾಧ್ಯಕ್ಷರು ವಿಶೇಷ ಬಲಿಪೂಜೆಯನ್ನು ನೆರವೇರಿಸುವರು.

ಜನವರಿ 15ರಂದು ಬೆಳಿಗ್ಗೆ 10.00 ಘಂಟೆಗೆ ಕಾರವಾರ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತೀ ವಂದನೀಯ ದುಮಿಂಗ್ ಡಾಯಸ್ ನಡೆಸಿಕೊಡಲಿರುವರು. ಇದು ಮಕ್ಕಳಿಗಾಗಿ ಅರ್ಪಿಸಲಾಗುವ ವಿಶೇಷ ಪೂಜಾವಿಧಿಯಾಗಿದೆ. ಮಹೋತ್ಸವದ ಸಮಾರೋಪ ಪ್ರಾರ್ಥನಾವಿಧಿ ಸಂಜೆ 6.00 ಘಂಟೆಗೆ ಅತಿ ವಂದನೀಯ ಮೊನ್ಸಿಂಞೆರ್ ಮ್ಯಾಕ್ಸಿಂ ನೊರೊನ್ಹಾ, ಪ್ರಧಾನ ಗುರುಗಳು, ಮಂಗಳೂರು ಧರ್ಮಪ್ರಾಂತ್ಯ, ಇವರು ನೆರವೇರಿಸುವರು.

ಜನವರಿ 14ರಂದು ಜರಗುವ ಇತರ ಬಲಿಪೂಜೆಗಳ ವೇಳಾಪಟ್ಟಿ ಹೀಗಿದೆ : ಬೆಳಿಗ್ಗೆ 6.00 (ಕೊಂಕಣಿ), 8.00 (ಇಂಗ್ಲೀಶ್), 1.00 (ಕನ್ನಡ). ವಾರ್ಷಿಕ ಹಬ್ಬದ ಎರಡನೆಯ ದಿನ: ಜನವರಿ 15 ರಂದು ಬೆಳಿಗ್ಗೆ 6.00, 8.00 ಘಂಟೆಗೆ ಕೊಂಕಣಿಯಲ್ಲಿ, 10.00 ಘಂಟೆಗೆ ಮಕ್ಕಳಿಗಾಗಿ ವಿಶೇಷ ಪೂಜೆ ಹಾಗೂ 1.00 ಘಂಟೆಗೆ ಮಲಯಾಳಂ ಭಾಷೆಯಲ್ಲಿ ಪೂಜೆ ನೆರವೇರುವುದು.

ನವದಿನಗಳ ನವೇನಾ ಪ್ರಾರ್ಥನೆ: ಈ ಎರಡು ದಿನದ ವಾರ್ಷಿಕ ಮಹೋತ್ಸವಕ್ಕಾಗಿ ನವದಿನಗಳ ಸಿದ್ಧತೆ – ನವೇನಾ ಪ್ರಾರ್ಥನೆ ಜನವರಿ 5 ರಿಂದ ಜನವರಿ 13 ರ ವರೆಗೆ ನಡೆಯಲಿರುವುದು. ಆ ದಿನಗಳಲ್ಲಿ ಪ್ರತಿದಿನ 9 ಪ್ರಾರ್ಥನಾ ವಿಧಿಗಳು ನಡೆಯುವವು. ಬೆಳಿಗ್ಗೆ 6.00, 7.30, 9.00, 10.30 ಹಾಗೂ ಮಧ್ಯಾಹ್ನ 1.00 ಘಂಟೆಗೆ ಕೊಂಕಣಿ ಭಾಷೆಯಲಿ,್ಲ ಸಂಜೆ 4.00 ಘಂಟೆಗೆ ಮಲಯಾಳಂ, 5.00 ಘಂಟೆಗೆ ಇಂಗ್ಲೀಷ್ ಹಾಗೂ 7.45 ಘಂಟೆಗೆ ಕನ್ನಡದಲ್ಲಿ ಬಲಿಪೂಜೆಯು ನಡೆಯಲಿರುವುದು.

ಧರ್ಮಾಧ್ಯಕ್ಷರ ಪೂಜಾವಿಧಿಗಳು: ಜನವರಿ 5 ಸೋಮವಾರದಂದು ಬೆಳಿಗ್ಗೆ 10:30ರ ಪ್ರಾರ್ಥನಾ ವಿಧಿಯನ್ನು ಬರೇಲಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತೀ ವಂದನೀಯ ಇಗ್ನೇಶಿಯಸ್ ಡಿಸೋಜಾರವರು ನೆರವೇರಿಸಲಿರುವರು. ಆ ದಿನದಂದು ಅನಿವಾಸಿ ಭಾರತೀಯರಿಗಾಗಿ ಪ್ರಾರ್ಥಿಸಲಾಗುವುದು.

ಜನವರಿ 10, ಶನಿವಾರದಂದು ಬೆಳಿಗ್ಗೆ 10:30ರ ಬಲಿಪೂಜೆಯನ್ನು ಬಳ್ಳಾರಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತೀ ವಂದನೀಯ ಹೆನ್ರಿ ಡಿಸೋಜಾ, ಇವರು ನೆರವೇರಿಸಲಿರುವರು. ಈ ದಿನದಂದು ಎಲ್ಲಾ ಮಕ್ಕಳಿಗಾಗಿ ಪ್ರಾರ್ಥಿಸಲಾಗುವುದು.

ಪರಮ ಪ್ರಸಾದದ ಆರಾಧನೆ: ಪ್ರತಿ ನವೆನಾ ದಿನಗಳಲ್ಲಿ 11.45 ರಿಂದ 12.30 ಘಂಟೆಯ ವರೆಗೆ ನಡೆಯುವುದು. ಈ ವೇಳೆ ವಿವಿಧ ಅಗತ್ಯಗಳಿಗಾಗಿ ಪ್ರಾರ್ಥನೆಯನ್ನು ಸಲ್ಲಿಸಲಾಗುವುದು.

ದಿವ್ಯಬಾಲ ಯೇಸುವಿನ ಮೆರವಣಿಗೆಯನ್ನು ಪ್ರತಿದಿನ ಸಂಜೆಯ 6.00 ಘಂಟೆಯ ಬಲಿಪೂಜೆಯ ಬಳಿಕ ಸುಮಾರು 7:15 ಕ್ಕೆ ಹಮ್ಮಿಕೊಳ್ಳಲಾಗಿದೆ.

ಹೊರೆಕಾಣಿಕೆ : ಮಹೋತ್ಸವದ ಹೊರೆಕಾಣಿಕೆಯು ಜನವರಿ 3 ರಂದು ಸಂಜೆ 4.30 ಘಂಟೆಗೆ ಹೋಲಿಕ್ರಾಸ್ ಚರ್ಚ್, ಕುಲಶೇಕರದಿಂದ ಆರಂಭಗೊಳ್ಳುವುದು. ಹೊರೆಕಾಣಿಕೆಯ ಅಂತಿಮಭಾಗದಲ್ಲಿ ಸಹಬಾಳ್ವೆ ಎನ್ನುವ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಆನಂತರ ವಂ| ಡಾ| ಪ್ರವೀಣ್ ಮಾರ್ಟಿಸ್, ಸಂತ ಅಲೋಶಿಯಸ್ ವಿಶ್ವ ವಿದ್ಯಾಲಯದ ಉಪಕುಲಪತಿಯವರು ಧ್ವಜಾರೋಹಣವನ್ನು ಮಾಡುವರು.

ಅನ್ನಸಂತರ್ಪಣೆ: ನವೇನಾ ಹಾಗೂ ಹಬ್ಬದ ದಿನಗಳಲ್ಲಿ (ಜನವರಿ 5 ರಿಂದ 15 ರ ವರೆಗೆ) ಮಧ್ಯಾಹ್ನದ ವೇಳೆ ಭಕ್ತಾಧಿಗಳಿಗೆ ಅನ್ನ ಸಂತರ್ಪಣೆಯು ನಡೆಯಲಿರುವುದು.

ಕಣ್ಣಿನ ಶಿಬಿರ: ಜನವರಿ 7 ರಂದು ಬೆಳಿಗ್ಗೆ 8.30 ರಿಂದ ಮಧ್ಯಾಹ್ನ 1.00 ಘಂಟೆಯ ವರೆಗೆ ಕಣ್ಣಿನ ಶಿಬಿರವನ್ನು ಏರ್ಪಡಿಸಲಾಗಿದೆ.
ರಕ್ತದಾನ ಶಿಬಿರ : ಜನವರಿ 9 ಹಾಗೂ 10 ರಂದು ಬೆಳಿಗ್ಗೆ 8.30 ರಿಂದ ಮಧ್ಯಾಹ್ನ 1.00 ಘಂಟೆಯ ವರೆಗೆ ರಕ್ತದಾನ ಶಿಬಿರವನ್ನು ಏರ್ಪಡಿಸಲಾಗಿದೆ.

ಸಮಾಜಾಭಿವೃದ್ಧಿ ಯೋಜನೆಯ ಅನಾವರಣ: ಕಾರ್ಮೆಲ್ ಸಭೆಯ ಸುಧಾರಕಾರಾದ ಶಿಲುಬೆಯ ಸಂತ ಯೊವಾನ್ನರನ್ನು ಸಂತ ಪದವಿಗೇರಿಸಿ 300 ಸಂವತ್ಸರಗಳು ಹಾಗೂ ಧರ್ಮಸಭೆಯ ಪಂಡಿತ ಎಂದು ನಾಮಕರಣಗೊಳಿಸಿ ಶತಾಬ್ದಿಯನ್ನು ಪೂರೈಸುವ ಜುಬಿಲಿ ವರ್ಷದಲ್ಲಿ ಕಾರ್ಮೆಲ್ ಇಗ್ನೆಟ್ ಎನ್ನುವ ಕಾರ್ಯಕ್ರಮದಡಿ ಬಡ ಹಾಗೂ ಯೋಗ್ಯ 400 ವಿಧ್ಯಾರ್ಥಿಗಳಿಗೆ ವಿಧ್ಯಾರ್ಥಿ ವೇತನವನ್ನು ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ವಸ್ತು ಪ್ರದರ್ಶನ: ನವೇನಾ ಹಾಗೂ ಹಬ್ಬದ ದಿನಗಳಲ್ಲಿ ಶಿಲುಬೆಯ ಸಂತ ಯೊವಾನ್ನರ ಜೀವನ ಹಾಗೂ ಬೋದನೆಗಳನ್ನು ಆದರಿಸಿ ಒಂದು ವಿಶೇಸ ವಸ್ತು ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿದೆ.

ಪ್ರತಿಕಾಗೋಷ್ಠಿಯಲ್ಲಿ ಹಾಜರಿದ್ದವರು : ವಂದನೀಯ ಫಾ| ಮೆಲ್ವಿನ್ ಡಿಕುನ್ಹಾ, ಗುರುಮಠದ ಮುಖ್ಯಸ್ಥರು, ಬಾಲಯೇಸುವಿನ ಪುಣ್ಯಕ್ಷೇತ್ರ, ವಂದನೀಯ ಫಾ| ಸ್ಟೀಫನ್ ಪಿರೇರಾ, ನಿರ್ದೇಶಕರು, ಬಾಲಯೇಸುವಿನ, ಪುಣ್ಯಕ್ಷೇತ್ರ, ವಂದನೀಯ ಫಾ| ದೀಪ್ ಫೆರ್ನಾಂಡಿಸ್, ಕಾರ್ಮೆಲ್ ಸಭೆ, ಶ್ರೀ ವಲೇರಿಯನ್ ಫುರ್ಟಾಡೊ, ಬಾಳೊಕ್ ಜೆಜು ಕುಟಮ್, ಶ್ರೀ ವಿಲ್‌ಫ್ರೆಡ್ ಲಸ್ರಾದೊ, ವ್ಯವಸ್ಥಾಪಕರು, ಬಾಲಯೇಸುವಿನ ಪುಣ್ಯಕ್ಷೇತ್ರ

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Discover more from Coastal Times Kannada

Subscribe to get the latest posts sent to your email.

Previous Post

ಅಕ್ರಮ ಬೆಟ್ಟಿಂಗ್ ಪ್ರಕರಣ; ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅವರಿಗೆ 4 ತಿಂಗಳ ಬಳಿಕ ಷರತ್ತುಬದ್ಧ ಜಾಮೀನು.

Next Post

ನಿಟ್ಟೆ ಶಿಕ್ಷಣ ಸಂಸ್ಥೆಗಳ ಸಮೂಹದ ಅಧ್ಯಕ್ಷ ಎನ್ ವಿನಯ ಹೆಗ್ಡೆ ನಿಧನ

Related Posts

ಅಮ್ಮ ಮಂಗಳೂರಿನಲ್ಲಿ ಮೇ 28 ಮತ್ತು29 ರಂದು ಜೀವನೋಲ್ಲಾಸದ ಸಂಭ್ರಮಾಚರಣೆ.
ಕರಾವಳಿ

ಅಮ್ಮ ಮಂಗಳೂರಿನಲ್ಲಿ ಮೇ 28 ಮತ್ತು29 ರಂದು ಜೀವನೋಲ್ಲಾಸದ ಸಂಭ್ರಮಾಚರಣೆ.

May 25, 2026
25
ಮಂಗಳೂರು: ಪ್ರಥಮ ಬಾರಿ ಏಕಕಾಲಕ್ಕೆ ಪಾಲೆಮಾರ್ ಸಮೂಹದಿಂದ ನಾಲ್ಕು ಅತ್ಯಾಧುನಿಕ ಸಭಾಭವನಗಳು ಲೋಕಾರ್ಪಣೆ
ಕರಾವಳಿ

ಮಂಗಳೂರು: ಪ್ರಥಮ ಬಾರಿ ಏಕಕಾಲಕ್ಕೆ ಪಾಲೆಮಾರ್ ಸಮೂಹದಿಂದ ನಾಲ್ಕು ಅತ್ಯಾಧುನಿಕ ಸಭಾಭವನಗಳು ಲೋಕಾರ್ಪಣೆ

May 23, 2026
72
Next Post
ನಿಟ್ಟೆ ಶಿಕ್ಷಣ ಸಂಸ್ಥೆಗಳ ಸಮೂಹದ ಅಧ್ಯಕ್ಷ ಎನ್ ವಿನಯ ಹೆಗ್ಡೆ ನಿಧನ

ನಿಟ್ಟೆ ಶಿಕ್ಷಣ ಸಂಸ್ಥೆಗಳ ಸಮೂಹದ ಅಧ್ಯಕ್ಷ ಎನ್ ವಿನಯ ಹೆಗ್ಡೆ ನಿಧನ

Discussion about this post

Recent News

ಅಮ್ಮ ಮಂಗಳೂರಿನಲ್ಲಿ ಮೇ 28 ಮತ್ತು29 ರಂದು ಜೀವನೋಲ್ಲಾಸದ ಸಂಭ್ರಮಾಚರಣೆ.

ಅಮ್ಮ ಮಂಗಳೂರಿನಲ್ಲಿ ಮೇ 28 ಮತ್ತು29 ರಂದು ಜೀವನೋಲ್ಲಾಸದ ಸಂಭ್ರಮಾಚರಣೆ.

May 25, 2026
25
ಬೆಂಗಳೂರು: ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ವೃದ್ಧೆಯೋರ್ವರನ್ನು ಬೆದರಿಸಿ ಬರೋಬ್ಬರಿ 24 ಕೋಟಿ ರೂಪಾಯಿ ಸುಲಿಗೆ ಮಾಡಿದ ಐವರ ಬಂಧನ

ಬೆಂಗಳೂರು: ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ವೃದ್ಧೆಯೋರ್ವರನ್ನು ಬೆದರಿಸಿ ಬರೋಬ್ಬರಿ 24 ಕೋಟಿ ರೂಪಾಯಿ ಸುಲಿಗೆ ಮಾಡಿದ ಐವರ ಬಂಧನ

May 25, 2026
43
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002

Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಅಮ್ಮ ಮಂಗಳೂರಿನಲ್ಲಿ ಮೇ 28 ಮತ್ತು29 ರಂದು ಜೀವನೋಲ್ಲಾಸದ ಸಂಭ್ರಮಾಚರಣೆ.

ಅಮ್ಮ ಮಂಗಳೂರಿನಲ್ಲಿ ಮೇ 28 ಮತ್ತು29 ರಂದು ಜೀವನೋಲ್ಲಾಸದ ಸಂಭ್ರಮಾಚರಣೆ.

May 25, 2026
ಬೆಂಗಳೂರು: ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ವೃದ್ಧೆಯೋರ್ವರನ್ನು ಬೆದರಿಸಿ ಬರೋಬ್ಬರಿ 24 ಕೋಟಿ ರೂಪಾಯಿ ಸುಲಿಗೆ ಮಾಡಿದ ಐವರ ಬಂಧನ

ಬೆಂಗಳೂರು: ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ವೃದ್ಧೆಯೋರ್ವರನ್ನು ಬೆದರಿಸಿ ಬರೋಬ್ಬರಿ 24 ಕೋಟಿ ರೂಪಾಯಿ ಸುಲಿಗೆ ಮಾಡಿದ ಐವರ ಬಂಧನ

May 25, 2026
ಮಂಗಳೂರು: ಪ್ರಥಮ ಬಾರಿ ಏಕಕಾಲಕ್ಕೆ ಪಾಲೆಮಾರ್ ಸಮೂಹದಿಂದ ನಾಲ್ಕು ಅತ್ಯಾಧುನಿಕ ಸಭಾಭವನಗಳು ಲೋಕಾರ್ಪಣೆ

ಮಂಗಳೂರು: ಪ್ರಥಮ ಬಾರಿ ಏಕಕಾಲಕ್ಕೆ ಪಾಲೆಮಾರ್ ಸಮೂಹದಿಂದ ನಾಲ್ಕು ಅತ್ಯಾಧುನಿಕ ಸಭಾಭವನಗಳು ಲೋಕಾರ್ಪಣೆ

May 23, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

%d