ಮಂಗಳೂರು, ಜು 6 : ದ.ಕ. ಜಿಲ್ಲೆಯಲ್ಲಿ ಮುಂದುವರೆದ ಭಾರೀ ಮಳೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಜುಲೈ 7ರ ಶುಕ್ರವಾರದಂದು ಶಾಲೆ, ಪಿ.ಯು. ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯಲ್ಲಿ ನಾಳೆಯ ತನಕ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮಂಗಳವಾರದಿಂದ ನಿರಂತರ ಮಳೆ ಸುರಿದಿದೆ. ಶುಕ್ರವಾರವೂ ಮಳೆಯ ಆರ್ಭಟ ಮುಂದುವರೆಯುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಮಕ್ಕಳ ಹಿತದೃಷ್ಟಿಯಿಂದ ರಜೆ ನೀಡಲಾಗಿದೆ. ಪ್ರಮುಖವಾಗಿ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ, ಪ್ರೌಢ ಶಾಲೆಗಳು, ಪಿಯು ಕಾಲೇಜುಗಳ ತನಕವೂ ರಜೆ ಘೋಷಣೆ ಮಾಡಲಾಗಿದೆ. ಸರಕಾರಿ, ಅನುದಾನಿತ ಅನುದಾನ ರಹಿತ ಶಾಲೆ ಕಾಲೇಜುಗಳಿಗೆ ಅನ್ವಯವಾಗಲಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಇದೇ ವೇಳೆ, ಉಡುಪಿ ಜಿಲ್ಲೆಯಲ್ಲಿಯೂ ಭಾರೀ ಮಳೆ ಮತ್ತು ರೆಡ್ ಅಲರ್ಟ್ ಹಿನ್ನೆಲೆಯಲ್ಲಿ ನಾಳೆ (ಜುಲೈ 7) ಸತತ ನಾಲ್ಕನೇ ದಿನ ಜಿಲ್ಲೆಯಾದ್ಯಂತ ಶಾಲೆ, ಕಾಲೇಜಿಗೆ ರಜೆ ಘೋಷಿಸಲಾಗಿದೆ. ಜಿಲ್ಲಾಧಿಕಾರಿ ಕೂರ್ಮ ರಾವ್ ಈ ಬಗ್ಗೆ ಆದೇಶ ಹೊರಡಿಸಿದ್ದಾರೆ.
Discussion about this post