ಮಂಗಳೂರು, ಆ.3: ಇನ್ಸ್ಟಾಗ್ರಾಮ್ನಲ್ಲಿ ಹಿಂದೂ ದೇವರ ಬಗ್ಗೆ ಅಶ್ಲೀಲವಾಗಿ ಕಮೆಂಟ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ದಂತೆ ಬಿಕರ್ನಕಟ್ಟೆಯ ಹಿಲ್ರೋಡ್ ನಿವಾಸಿ ಸಲ್ಮಾನ್ (22) ಎಂಬಾತನನ್ನು ಮಂಗಳೂರು ಸೆನ್ ಠಾಣಾ ಪೊಲೀಸರು ಬಂಧಿಸಿದ್ದಾರೆ.
‘ನಗರದ ಬಿಕರ್ನಕಟ್ಟೆಯ ಮಸೀದಿ ಹಿಲ್ ರಸ್ತೆ ಬಳಿಯ ನಿವಾಸಿ ಮೊಹಮ್ಮದ್ ಸಲ್ಮಾನ್ (22) ಬಂಧಿತ. ಆರೋಪಿಯು ಹಿಂದೂ ದೇವರ ಬಗ್ಗೆ ಇನ್ಸ್ಟಾಗ್ರಾಂ ಖಾತೆಯೊಂದರಲ್ಲಿ ಅಶ್ಲೀಲವಾಗಿ ಕಮೆಂಟ್ ಮಾಡಿದ್ದ ಬಗ್ಗೆ ಸೆನ್ ಠಾಣೆಯಲ್ಲಿ ದೂರು ದಾಖಲಾಗಿತ್ತು’ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯನ್ನು ನಗರದ 7ನೇ ಜೆ.ಎಂ.ಎಫ್ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ ’ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ನಗರ ಪೊಲೀಸ್ ಕಮಿಷನರ್ ಕುಲದೀಪ್ ಆರ್. ಜೈನ್ರ ಮಾರ್ಗದರ್ಶನದಂತೆ ನಗರ ಸೆನ್ ಕ್ರೈಂ ಪೊಲೀಸ್ ಠಾಣಾ ಇನ್ಸ್ಪೆಕ್ಟರ್ ಸತೀಶ್ ಎಂಪಿ ಮತ್ತು ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ.
Discussion about this post