ಬಜಪೆ: ನಿಲ್ಲಿಸಿದ್ದ ವಾಹನಗಳ ಬ್ಯಾಟರಿ ಕಳವು ಮಾಡುತ್ತಿದ್ದ ಇಬ್ಬರನ್ನು ಬಜಪೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮೂಡುಪೆರಾರ ಗ್ರಾಮದ ಈಶ್ವರಕಟ್ಟೆ ಕೊಲವೇಲಾ ರಾಘವೇಂದ್ರ ಭಜನಾ ಮಂದಿರದ ಸಮೀಪದ ನಿವಾಸಿ ಪ್ರತಾಪ್ (20), ಕಂದಾವರ ಗ್ರಾಮದ ಚರ್ಚ್ ರೋಡ್ ನಿವಾಸಿ ಅನಿಲ್ (23) ಎಂದು ಗುರುತಿಸಲಾಗಿದೆ.
ಬಂಧಿತರಿಂದ ಸುಮಾರು 4 ಲಕ್ಷ ರೂ. ಮೌಲ್ಯದ ಒಂದು ಕಾರು ಮತ್ತು 1.50 ಲಕ್ಷ ರೂ. ಮೌಲ್ಯದ ಒಟ್ಟು 17 ಬ್ಯಾಟರಿಗಳನ್ನು ಪೊಲೀಸರು ವಶಕ್ಕೆ ಪಡಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಅದ್ದೂರು, ಕೈಕಂಬ ಮತ್ತು ಗುರುಪುರ ಪರಿಸರಗಳಲ್ಲಿ ಪಾರ್ಕ್ ಮಾಡಿದ್ದ ಟಿಪ್ಪರ್ ಲಾರಿ, ಜೆ.ಸಿ.ಬಿ ಮತ್ತು ಇತರ ವಾಹನಗಳಿಂದ ಬ್ಯಾಟರಿಗಳು ಕಳವಾಗಿರುವ ಬಗ್ಗೆ ಬಜ್ಪೆ ಪೊಲೀಸ್ ಠಾಣೆಯಲ್ಲಿ 2 ಪ್ರತ್ಯೇಕ ಪ್ರಕರಣಗಳು ದಾಖಲಾಗಿತ್ತು. ಆ.8ರಂದು ಬ್ಯಾಟರಿಗಳನ್ನು ಕಾರೊಂದರಲ್ಲಿ ತುಂಬಿಕೊಂಡು ಮಾರಾಟಕ್ಕೆ ಹೋಗುತ್ತಿರುವ ಕುರಿತು ಬಜ್ಪೆ ಪೊಲೀಸ್ ನಿರೀಕ್ಷಕ ಪ್ರಕಾಶ್ ಅವರಿಗೆ ದೊರೆತ ಖಚಿತ ಮಾಹಿತಿಯ ಆಧಾರದಲ್ಲಿ ಬಜ್ಪೆ ಪೊಲೀಸರು ದಾಳಿ ಮಾಡಿ ಆರೋಪಿಗಳನ್ನು ಸೊತ್ತು ಸಹಿತ ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಪೊಲೀಸ್ ಇನ್ಸ್ಪೆಕ್ಟರ್ ಪ್ರಕಾಶ್ ನೇತೃತ್ವದಲ್ಲಿ ಪೊಲೀಸ್ ಉಪ ನಿರೀಕ್ಷಕ ಗುರಪ್ಪ ಕಾಂತಿ, ರೇವಣ ಸಿದ್ದಪ್ಪ, ಕುಮಾರೇಶನ್, ಲತಾ ಮತ್ತು ಅಪರಾಧ ಪತ್ತೆ ವಿಭಾಗದ ಸಿಬ್ಬಂದಿ, ಎಎಸ್ಐ ರಾಮ ಪೂಜಾರಿ, ಸುಜನ್, ರಶೀದ್ ಶೇಖ್, ಬಸವರಾಜ್ ಪಾಟೀಲ್, ಜಗದೀಶ್, ಸಂತೋಷ್, ಪ್ರಕಾಶ, ಕೆಂಚಪ್ಪ, ಕೆಂಚನಗೌಡ ಪತ್ತೆ ಕಾರ್ಯದಲ್ಲಿ ಭಾಗವಹಿಸಿದ್ದರು.
Discover more from Coastal Times Kannada
Subscribe to get the latest posts sent to your email.
Discussion about this post