ಮಂಗಳೂರು: ನಗರದ ಕದ್ರಿ ಕಂಬಳದ ಚಂದ್ರಿಕಾ ಬಡಾವಣೆಯ ಮನೆಯಲ್ಲಿಅಕ್ಕ– ತಂಗಿ ಇಬ್ಬರು ಫ್ಯಾನಿಗೆ ನೇಣು ಬಿಗಿದುಕೊಂಡು ಮಂಗಳವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸುಂದರಿ ಶೆಟ್ಟಿ (80) ಮತ್ತು ಅವರ ತಂಗಿ ಲತಾ ಭಂಡಾರಿ (70). ಆತ್ಮಹತ್ಯೆ ಮಾಡಿಕೊಂಡವರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಲತಾ ಭಂಡಾರಿ(70) ಮತ್ತು ಅವರ ಅಕ್ಕ ಸುಂದರಿ ಶೆಟ್ಟಿ(80) ಮೃತ ಸೋದರಿಯರು. ಲತಾ ಭಂಡಾರಿ ಅವರ ಪತಿ ಜಗನ್ನಾಥ ಭಂಡಾರಿ ಬಾರ್ ಒಂದರಲ್ಲಿ ಕೆಲಸ ಮಾಡುತ್ತಿದ್ದು ಮಂಗಳವಾರ ಬೆಳಗ್ಗೆ ಎಂದಿನಂತೆ ಕೆಲಸಕ್ಕೆ ತೆರಳಿದ್ದರು. ಸಂಜೆ 4.30ರ ವೇಳೆಗೆ ಮನೆಗೆ ಬಂದು ನೋಡಿದಾಗ ಮನೆಯ ಬಾಗಿಲು ಬಂದ್ ಆಗಿತ್ತು. ಕಿಟಕಿಯಿಂದ ನೋಡಿದಾಗ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡುಬಂದಿದೆ.
ಇವರಿಗೆ ಮಕ್ಕಳಿರಲಿಲ್ಲ ಎನ್ನಲಾಗುತ್ತಿದ್ದು, ಕೌಟುಂಬಿಕ ವಿಚಾರದಲ್ಲಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವ ಮಾಹಿತಿ ಇದೆ. ಕದ್ರಿ ಪೊಲೀಸರು ಸ್ಥಳದಲ್ಲಿದ್ದು, ತನಿಖೆ ನಡೆಸುತ್ತಿದ್ದಾರೆ.
Discussion about this post