ಮಂಗಳೂರು: ಕ್ಯಾ.ಪ್ರಾಂಜಲ್ ಗೌರವಾರ್ಥ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಡೆಯುವ ‘ಕೆಯುಡಬ್ಲ್ಯುಜೆ ಬ್ರ್ಯಾಂಡ್ ಮಂಗಳೂರು ರೋಹನ್ ಕಪ್ ಕ್ರಿಕೆಟ್’ ಪಂದ್ಯಾಟದ 2024ರ ಪೋಸ್ಟರ್ನ್ನು ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಬುಧವಾರ ಕಚೇರಿಯ ಆವರಣದಲ್ಲಿ ಬಿಡುಗಡೆಗೊಳಿಸಿದರು.
ಈ ಸಂದರ್ಭ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಮಂಗಳೂರು ಪ್ರೆಸ್ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ, ಪಂದ್ಯಾವಳಿಯ ಪ್ರಧಾನ ಸಂಚಾಲಕ ಅನ್ನು ಮಂಗಳೂರು, ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್, ಉಪಾಧ್ಯಕ್ಷ ಭಾಸ್ಕರ್ ರೈ ಕಟ್ಟ, ಕಾರ್ಯಕಾರಿ ಸಮಿತಿ ಸದಸ್ಯ ರಾಜೇಶ್ ದಡ್ಡಂಗಡಿ ಉಪಸ್ಥಿತರಿದ್ದರು.
Discussion about this post