ಮಂಗಳೂರು: ನಗರದ ಸಹ್ಯಾದ್ರಿ ಕಾಲೇಜು ಮೈದಾನದಲ್ಲಿ ಫೆ.17 ರಂದು ನಡೆಯಲಿರುವ ಕಾಂಗ್ರೆಸ್ ಕಾರ್ಯಕರ್ತರ ರಾಜ್ಯ ಮಟ್ಟದ ಸಮಾವೇಶಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷದ ರಾಜ್ಯ ನಾಯಕರು ಹಾಗೂ ಕಾರ್ಯಕರ್ತರು ಆಗಮಿಸಲಿರುವ ಹಿನ್ನೆಲೆಯಲ್ಲಿ ವಾಹನಗಳ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾಗಿದೆ.
ಸುಗಮ ಸಂಚಾರಕ್ಕೆ ಮತ್ತು ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ರಾಷ್ಟ್ರೀಯ ಹೆದ್ದಾರಿ 73ರ ರಸ್ತೆಯಲ್ಲಿ ಸಂಚರಿಸುವ ಘನ ವಾಹನಗಳ ಸಂಚಾರದ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾಗಿದೆ . ಸಮಾವೇಶಕ್ಕೆ ಆಗಮಿಸುವ ಕಾರ್ಯಕರ್ತರ ವಾಹನಗಳನ್ನು ನಿಲ್ಲಿಸಲು ಸ್ಥಳಗಳನ್ನು ನಿಗದಿಪಡಿಸಲಾಗಿದೆ.
ವಾಹನ ಪಾರ್ಕಿಂಗ್ ಸ್ಥಳಗಳ ವಿವರ : ಬಂಟ್ವಾಳ ಕಡೆಯಿಂದ ಕಾರ್ಯಕ್ರಮಕ್ಕೆ ಬರುವ ವಿಐಪಿ ವಾಹನಗಳನ್ನು ಕಾಮತ್ ಮೈದಾನದಲ್ಲಿ ಪಾರ್ಕ್ ಮಾಡುವುದು, ಬಂಟ್ವಾಳ ಕಡೆಯಿಂದ ಬರುವ ಸಾರ್ವಜನಿಕರ ವಾಹನಗಳನ್ನು ಅಡ್ಯಾರ್ ಕರ್ಮಾರ್ ಮೈದಾನದಲ್ಲಿ ಪಾರ್ಕಿಂಗ್ ಮಾಡುವುದು. ಬಂಟ್ವಾಳದಿಂದ ಬರುವ ಬಸ್ಸುಗಳು ಕಣ್ಣೂರಿನಲ್ಲಿ ಯೂ ಟರ್ನ್ ಮಾಡಿ ಮೋತಿ ಶ್ಯಾಮ್ ಮೈದಾನದಲ್ಲಿ ಪಾರ್ಕ್ ಮಾಡುವುದು.
ಮಂಗಳೂರು ಕಡೆಯಿಂದ ಬರುವ ವಾಹನಗಳು ಅಡ್ಯಾರ್ ಗಾರ್ಡನಲ್ಲಿ ಪಾರ್ಕಿಂಗ್ ಮಾಡುವುದು. ಕಾರ್ಯಕರ್ಕರನ್ನು ಕರೆತರುವ ವಾಹನಗಳು ಜನರನ್ನು ಇಳಿಸಿ ಕಣ್ಣೂರು ಮಸೀದಿ ಬಳಿಯ ಮೈದಾನದಲ್ಲಿ ಪಾರ್ಕ್ ಮಾಡುವುದು. ಅಡ್ಯಾರ್ ಕಟ್ಟೆಯ ಜಯಶೀಲ ಅಡ್ಯಂತಾಯರ ಮೈದಾನದಲ್ಲಿಯೂ ಪಾರ್ಕಿಂಗ್ ಅವಕಾಶ ಇದೆ.
Discussion about this post