ಮೈಸೂರು: ತಿ.ನರಸೀಪುರ ತಾಲ್ಲೂಕಿನ ವಿದ್ಯೋದಯ ಜೂನಿಯರ್ ಕಾಲೇಜಿಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲು ಬಂದಿದ್ದ ವಿದ್ಯಾರ್ಥಿನಿ ಕುಸಿದುಬಿದ್ದು ಮೃತಪಟ್ಟಿದ್ದಾರೆ.
ನರಸೀಪುರ ತಾಲ್ಲೂಕಿನ ಅಕ್ಕೂರು ಗ್ರಾಮದ ನಿವಾಸಿ ಅನುಶ್ರೀ ಮೃತಪಟ್ಟ ವಿದ್ಯಾರ್ಥಿನಿ. ಮಾದಾಪುರ ಪ್ರೌಢಶಾಲೆಯಲ್ಲಿ ಓದುತ್ತಿದ್ದರು.
‘ವಿದ್ಯಾರ್ಥಿನಿ 5 ನಿಮಿಷ ಪರೀಕ್ಷೆ ಬರೆದಿದ್ದಾಳೆ. ಪರೀಕ್ಷಾ ಕೇಂದ್ರದಲ್ಲಿ ಕುಸಿದು ಬಿದ್ದ ಆಕೆಯನ್ನು ಸಿಬ್ಬಂದಿ ತಕ್ಷಣವೇ ನರಸೀಪುರದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದರು. ಆದರೆ ಆಸ್ಪತ್ರೆಯಲ್ಲಿ ಪರೀಕ್ಷಿಸಿದ ವೈದ್ಯರು ಯುವತಿ ಸಾವನ್ನಪ್ಪಿರುವುದಾಗಿ ತಿಳಿಸಿದ್ದಾರೆ. ಸಾವಿಗೆ ಹೃದಯಾಘಾತ ಕಾರಣ ಎಂದು ಹೇಳಲಾಗುತ್ತಿದೆ. ಮಾದಾಪುರ ಪ್ರೌಢಶಾಲೆಯಲ್ಲಿ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದಳು. ಟಿ ನರಸೀಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ವೈದ್ಯಕೀಯ ವರದಿ ಇನ್ನೂ ಬಾರದ ಕಾರಣ ಶಿಕ್ಷಣ ಇಲಾಖೆ ಅಧಿಕಾರಿಗಳು ಈ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ.
Discussion about this post