ಮಂಗಳೂರು: ಮಹಾನಗರ ಪಾಲಿಕೆಯ ಹಿರಿಯ ನೈರ್ಮಲ್ಯ ನಿರೀಕ್ಷಕ ಶಿವಲಿಂಗ ಕೊಂಡಗುಳಿ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿದ ಆರೋಪ ಸಾಬೀತಾಗಿದ್ದು, ಅವರಿಗೆ ಮೂರನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯವು ನಾಲ್ಕು ವರ್ಷ ಸಜೆ ಹಾಗೂ ₹ 1 ಕೋಟಿ ದಂಡ ವಿಧಿಸಿ ಶುಕ್ರವಾರ ತೀರ್ಪು ನೀಡಿದೆ. ಆರೋಪಿ ಶಿವಲಿಂಗ ಕೊಂಡಗುಳಿ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿದ್ದಾರೆಂಬ ಮಾಹಿತಿ ಮೇರೆಗೆ 2013ರ ಫೆಬ್ರವರಿ 15ರಂದು ಮಂಗಳೂರು ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದರು.
ಜಿಲ್ಲಾ ಸತ್ರ ನ್ಯಾಯಾಲಯ ಈ ಪ್ರಕರಣದ ವಿಚಾರಣೆ ನಡೆಸಿದ್ದು, ನ್ಯಾಯಾಧೀಶ ಬಿ.ಬಿ. ಜಕಾತಿ ಇಂದು ಅಂತಿಮ ತೀರ್ಪು ನೀಡಿದ್ದಾರೆ. ಆರೋಪಿ ವಿರುದ್ಧ ಕಲಂ 13(1) (ಇ) ಜತೆಗೆ 13(2) ಲಂಚ ನಿರೋಧ ಕಾಯ್ದೆ 1988ರಂತೆ ಶಿಕ್ಷೆ ವಿಧಿಸಿ ತೀರ್ಪು ನೀಡಲಾಗಿದೆ. ಆರೋಪಿ ದಂಡ ಕಟ್ಟಲು ವಿಫಲನಾದಲ್ಲಿ ಮತ್ತೆ 1 ವರ್ಷ ಸಾದಾ ಸಜೆಗೆ ಆದೇಶಿಸಿ ಅಂತಿಮ ತೀರ್ಪು ನೀಡಲಾಗಿದೆ.
Discussion about this post